
ಕಾಗವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷರು, ಕಾಗವಾಡ ಶಾಸಕರಾದ ರಾಜು ಕಾಗೆ ಅವರು ದಿ. 03-07-2025 ರಂದು ಕಾಗವಾಡದಲ್ಲಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಕಾಗವಾಡ-ಕಲಾದಗಿ ರಸ್ತೆ ಕಿ.ಮೀ. 0 ದಿಂದ 2.30 ರಲ್ಲಿ ಆಯ್ದ ಭಾಗಗಳಲ್ಲಿ ರಸ್ತೆ ಅಗಲೀಕರಣ ಮತ್ತು ಸುಧಾರಣೆ (ಚನ್ನಮ್ಮ ಸರ್ಕಲ್‌ದಿಂದ-ಆರ್.ಟಿ.ಒ. ಆಫೀಸ್ ವರೆಗೆ) ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಮಲ್ಲಿಕಾರ್ಜುನ ಮಗದುಮ್ಮ ಹಾಗೂ ಹಲವು ಗಣ್ಯಮಾನ್ಯರು, ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




