ಬೆಂಗಳೂರು: ಪೀಣ್ಯ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡಿನ ಭೈರೆವೇಶ್ವರ ನಗರದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಸ್ ಮುನಿರಾಜು ಪೂಜಾ ಪುನಸ್ಕಾರ ಸಲ್ಲಿಸಿ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಶೂನ್ಯ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಸರ್ಕಾರದಿಂದ ಕ್ಷೇತ್ರಗಳಿಗೆ ಅನುದಾನ ಸಮರ್ಪಕವಾಗಿ ಬಿಡುಗಡೆ ಮಾಡಿದರೆ ಕ್ಷೇತ್ರದಲ್ಲಿ ಆಗುವ ಆಭಿವೃದ್ಧಿ ಕೆಲಸಗಳು ಆಗುತ್ತವೆ ಕಾಂಗ್ರೆಸ್ ಸರ್ಕಾರದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಲವು ಕ್ಷೇತ್ರಗೆ ಅನುದಾನ ನೀಡಲು ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಶಾಸಕ ಎಸ್ ಮುನಿರಾಜು ಅವರು ಕಿಡಿಕಾರಿದ್ದಾರೆ.
ಈ ಸಂದರ್ಭದಲ್ಲಿ ಶೆಟ್ಟಿಹಳ್ಳಿ ವಾರ್ಡಿನ ಬಿಜೆಪಿ ಅಧ್ಯಕ್ಷ ಬಿ. ಸುರೇಶ್ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಶಿಲ್ಪಾ ಸುರೇಶ್ ಅವರು ಶಾಸಕ ಎಸ್ ಮುನಿರಾಜು ಅವರಿಗೆ ಆತ್ಮೀಯವಾಗಿ ಬರಮಾಡಿಕೊಂಡು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಶಾಸಕ ಎಸ್ ಮುನಿರಾಜು ಚಾಲನೆ ನೀಡಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಶೆಟ್ಟಿಹಳ್ಳಿ ವಾರ್ಡಿನ ಬಿಜೆಪಿ ಅಧ್ಯಕ್ಷ ಬಿ. ಸುರೇಶ್,ಭೈರವೇಶ್ವರ ನಗರದ ಮುಖಂಡರು ಮಹಿಳೆಯರು ಕಾರ್ಯಕರ್ತರು ಮತ್ತು ಗುತ್ತಿಗೆದಾರ ಲಕ್ಷ್ಮಣ್, ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡ ಆರಾಧ್ಯ ಸೇರಿದಂತೆ ಸಮಸ್ತ ನಾಗರಿಕರು ಮಹಿಳೆಯರು ಮುಂತಾದವರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್