ಸೇಡಂ : ತಾಲೂಕಿನ ಮೆದಕ್ ಮತ್ತು ಪಾಖಲ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣ ಹದೆಗೆಟ್ಟಿರುವದರಿಂದ ಈ ಮಾರ್ಗವಾಗಿ ಹೋಗುವ ವಾಹನ ಸವಾರರಿಗೆ ಅಪಘಾತ ಕಟ್ಟಿಟ್ಟ ಬುತ್ತಿ ಎಂಬಂತಾಗಿದೆ.
ಈ ಕುರಿತು ಸ್ಥಳೀಯರ ಅಭಿಪ್ರಾಯ ಪಡೆದಾಗ ಈ ರಸ್ತೆಯು ಸುಮಾರು ೩ವರ್ಷಗಳಿಂದ ಇದೇ ಸ್ಥಿತಿಯಲ್ಲಿದ್ದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮನವಿ ಮಾಡಿದರು ಇತ್ತಕಡೆ ಗಮನ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ವಲ್ಪ ಮಳೆ ಬಂದರೆ ಸಾಕು ಮೊಣಕಾಲು ಮುಳುಗುವ ತನ ನೀರು ನಿಲ್ಲುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಈ ಮಾರ್ಗವಾಗಿ ಹೋಗುವ ವಾಹನ ಸವಾರರಿಗೆ ತುಂಬಾ ತೊಂದರೆಯಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಂಡು ಯಾವುದೇ ಅನಾಹುತ ಆಗುವುದಕ್ಕಿಂತ ಮೊದಲೇ ರಸ್ತೆ ಸುಧಾರಣೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




