Ad imageAd image

16 ಲಕ್ಷ ರೈತರಿಗೆ  3 ಸಾವಿರ ರೂ. ಬರ ಪರಿಹಾರ ವಿತರಣೆ

Bharath Vaibhav
BARA
WhatsApp Group Join Now
Telegram Group Join Now

ಬೆಂಗಳೂರು: NDRF ಹಣ ಬಿಡುಗಡೆ ಆದ ಕೂಡಲೇ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿಸಲಾಗಿದೆ. ಇಲ್ಲಿಯವರೆಗೆ ಮೊದಲ ಹಂತದಲ್ಲಿ 2000ರೂ. ಮತ್ತು ಎರಡನೇ ಕಂತಿನ ಪರಿಹಾರವೂ ಸೇರಿದಂತೆ ಒಟ್ಟು 32.12 ಲಕ್ಷ ರೈತರ ಖಾತೆಗೆ ಈ ದಿನದವರೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ.

ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಇಂದು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಸುಮಾರು ತಾಲೂಕುಗಳಲ್ಲಿ ಬರ ಪರಿಹಾರ ಪಟ್ಟಿಯಲ್ಲಿ ಸೇರದೆ ಇದ್ದ ಮಳೆ ಆಧಾರಿತ ಬೆಳೆಗಳಿಗೂ ಪರಿಹಾರ ಧನ ವಿತರಿಸಲು ಮತ್ತು 2 ಲಕ್ಷ ಹೆಕ್ಟೇರ್‌ ನೀರಾವರಿ ಪ್ರದೇಶವನ್ನು ಒಳಗೊಳ್ಳುವ ಸುಮಾರು 1.63 ಲಕ್ಷ ಅರ್ಹ ರೈತರಿಗೂ ಪರಿಹಾರ ವಿತರಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಇದಲ್ಲದೆ, ಸಣ್ಣ ಮತ್ತು ಅತಿಸಣ್ಣ ಒಣ ಬೇಸಾಯ ಮಾಡುವ ಸುಮಾರು 16 ಲಕ್ಷ ಕುಟುಂಬಗಳಿಗೆ ಬರಗಾಲದಿಂದ ಆಗಿರುವ ಜೀವನೋಪಾಯದ ನಷ್ಟಕ್ಕೆ ಪರಿಹಾರವಾಗಿ ತಲಾ 3000 ರೂ. ಪರಿಹಾರ ನೀಡಲೂ ಸಹ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!