Ad imageAd image

ಇಂದಿನಿಂದ ಮೂರು ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ 

Bharath Vaibhav
ಇಂದಿನಿಂದ ಮೂರು ದಿನ ಇ-ಸ್ವತ್ತು ತಂತ್ರಾಂಶ ಸ್ಥಗಿತ 
WhatsApp Group Join Now
Telegram Group Join Now

ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವುದರಿಂದ 2024ರ ಜುಲೈ 27, 2024ರ ಇಂದಿನಿಂದ ಜುಲೈ 29ರವರೆಗೆ ಮೂರು ದಿನ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಸಾರ್ವಜನಿಕರ ಸಹಕಾರ ಕೋರಿದ್ದಾರೆ.

ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿರು ಸಚಿವರು ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!