ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮ ಸೇರಿ ಸುತ್ತಮುತ್ತಲು ಇಂದು 2.3 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಭೂಮಿಯಿಂದ ಸದ್ದು ಕೇಳಿಬರುತ್ತಿದ್ದಂತೆ ಗ್ರಾಮಸ್ಥರು ಮನೆ ಒಳಗಿಂದ ಭಯಗೊಂಡು ಓಡೋಡಿ ಹೊರ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.ಕೆ.ಎಸ್.ಡಿ.ಎಂ.ಸಿ. ಭೂಕಂಪನ ಕುರಿತಾಗಿ ಮಾಹಿತಿ ನೀಡಿದ್ದು, ಬೆಳಗ್ಗೆ 8.30ರ ಸುಮಾರಿಗೆ ಭೂಮಿ ಕಂಪಿಸಿದೆ.




