ಕೋಲ್ಕತ್ತಾ: ನಾಯಕ ಶುಭಮಾನ್ ಗಿಲ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಗುಜರಾತ್ ಟೈಟನ್ಸ್ ತಂಡ ಇಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 39 ರನ್ ಗಳಿಂದ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಮುಂದುವರೆಸಿತು.
ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ ತಂಡ ನಿಗದಿತ 20 ಓವರುಗಳಲ್ಲಿ 3 ವಿಕಟ್ ಗೆ 198 ರನ್ ಗಳಿಸಿತು. ಪ್ರತಿಯಾಗಿ ಆಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗೆ 159 ರನ್ ಗಳನ್ನು ಮಾತ್ರ ಗಳಿಸಿ ಪರಾಭವಗೊಂಡಿತು. ಈ ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ತಂಡ 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿ ಮುಂದುವರೆಯಿತು. ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮಾನ್ ಗಿಲ್ 90 ರನ್ ಗಳ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ಗೆಲುವಿನ ರೂವಾರಿಯಾದರು. ಜೊತೆಯಲ್ಲಿ ಪಂದ್ಯ ಶ್ರೇಷ್ಠ ಗೌರವಕ್ಕೂ ಭಾಜನರಾದರು.