This is the title of the web page
This is the title of the web page

Live Stream

September 2023
S M T W T F S
 12
3456789
10111213141516
17181920212223
24252627282930

| Latest Version 9.4.1 |

Entertainment News

ಬಾಲಿವುಡ್ ನಟ-ನಟಿಯರ ಮೇಲೆ ಇಡಿ ದಾಳಿ : 417 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ

Join The Telegram Join The WhatsApp

ಮುಂಬೈ : ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಾಲಿವುಡ್ ನಟ ನಟಿಯರಿಗೆ ಬಿಗ್ ಶಾಕ್ ನೀಡಿದ್ದು, ಹಲವು ಬಾಲಿವುಡ್ ನಟ-ನಟಿಯರ ಮೇಲೆ ಇಡಿ ದಾಳಿ ನಡೆಸಿದೆ.

ಹೌದು, ಹಲವಾರು ಬಾಲಿವುಡ್ ಸೆಲೆಬ್ರಿಟಿಗಳು ಇಡಿ ರೇಡ್ ನಲ್ಲಿದ್ದಾರೆ. ಬಾಲಿವುಡ್ ನಟರಾದ ಟೈಗರ್ ಶ್ರಾಫ್, ಸನ್ನಿ ಲಿಯೋನ್, ಕೃತಿ ಕರಬಂಧ, ಗಾಯಕರಾದ ನೇಹಾ ಕಕ್ಕಡ್, ಅತಿಫ್ ಅಸ್ಲಂ, ರಾಹತ್ ಫತೇ ಅಲಿ ಖಾನ್, ವಿಶಾಲ್ ದದ್ಲಾನಿ, ಸೇರಿದಂತೆ ಹಲವರು ಜಾರಿ ನಿರ್ದೇಶನಾಲಯದ ಬಲೆಗೆ ಬೀಳುವ ಸಾಧ್ಯತೆಯಿದೆ.

ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಗೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ವಿಶಾಲ್ ದದ್ಲಾನಿ, ಕೃಷ್ಣ ಅಭಿಷೇಕ್ ಸೇರಿದಂತೆ ಬಾಲಿವುಡ್ ಸೆಲೆಬ್ರಿಟಿಗಳು ಅದರಲ್ಲಿ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.ಈ ಹಿಂದೆ, ಅನೇಕ ಸೆಲೆಬ್ರಿಟಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಕೋಲ್ಕತಾ, ಭೋಪಾಲ್, ಮುಂಬೈ ಮುಂತಾದ ನಗರಗಳಲ್ಲಿ ಮಹಾದೇವ್ ಆಪ್ ಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಜಾಲಗಳ ವಿರುದ್ಧ ನಾವು ಶೋಧ ನಡೆಸಿದ್ದೇವೆ. 417 ಕೋಟಿ ಮೌಲ್ಯದ ಹಣ ಹಾಗೂ ಭಾರಿ ಮೊತ್ತದ ಚಿನ್ನಾಭರಣವನ್ನು ಮುಟ್ಟುಗೋಲು ಹಾಕಿಕೊಂಡಿದ್ದೇವೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದ್ದಾರೆ.

ಮೂಲಗಳ ಪ್ರಕಾರ, ಇಡಿ ಇದುವರೆಗೆ ರಾಜ್ಯದ 39 ಸ್ಥಳಗಳಲ್ಲಿ ಶೋಧ ನಡೆಸಿದೆ. ಈ ಕ್ರಮವು ಮಹಾದೇವ್ ಆನ್ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಗೆ ಸಂಬಂಧಿಸಿದೆ ಎಂದು ಹೇಳಲಾಗಿದೆ.


Join The Telegram Join The WhatsApp
Bharath Vaibhav
the authorBharath Vaibhav

Leave a Reply