ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿಂತೆ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ದದ್ದಲ್ ನಿವಾಸಕ್ಕೆ ಇಂದು ಬೆಳಗ್ಗೆ 7 ಗಂಟೆಗೆ ದೌಡಾಯಿಸಿದ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇತ್ತ ಬೆಂಗಳೂರಿನ ಯಲಹಂಕದಲ್ಲಿರುವ ಬಸನಗೌಡ ದದ್ದಲ್ ಮನೆ ಮೇಲೂ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ಮಾಜಿ ಸಚಿವ, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾಗೇಂದ್ರ ಮನೆ ಮೇಲೂ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮನೆ , ನಾಗೇಂದ್ರ ಫ್ಲ್ಯಾಟ್ ಮೇಲೂ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ..ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.