Ad imageAd image

ಅಂಬೇಡ್ಕರವರ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸಲು ಶಿಕ್ಷಣ ಇಲಾಖೆ ಸುತ್ತೋಲೆ

Bharath Vaibhav
ಅಂಬೇಡ್ಕರವರ ಜಯಂತಿಯನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸಲು ಶಿಕ್ಷಣ ಇಲಾಖೆ ಸುತ್ತೋಲೆ
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2024 ರಂದು ಮುಕ್ತಾಯವಾಗುತ್ತದೆ. ದಿನಾಂಕ: 14.04.2024 ರಂದು ಡಾ|| ಬಿ.ಆರ್.ಅಂಬೇಡ್ಕರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ದಿನಾಂಕ: 14.04.2024ರ ಭಾನುವಾರದಂದು ಡಾ| ಬಿ.ಆರ್. ಅಂಬೇಡ್ಕರ್ರವರ ಜಯಂತಿಯನ್ನು ಪ್ರಸ್ತುತ ಜಾರಿಯಲ್ಲಿರುವ ಲೋಕಸಭಾ ಚುನಾವಣೆ – 2024 ರ ಮಾದರಿ ನೀತಿ ಸಂಹಿತೆಯನ್ವಯ, ಪ್ರತಿ ವರ್ಷದಂತೆ ನಿಯಮಾನುಸಾರ ಆಚರಿಸಲು ಸೂಕ್ತ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಉಪನಿರ್ದೇಶಕರು(ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರಿಗೆ ಈ ಮೂಲಕ ಮತ್ತೊಮ್ಮೆ ತಿಳಿಸಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!