Ad imageAd image

ಎಂ ಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಅಡ್ಡ ಹಾಕಿ ಗಲಾಟೆ

Bharath Vaibhav
ಎಂ ಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಅಡ್ಡ ಹಾಕಿ ಗಲಾಟೆ
WhatsApp Group Join Now
Telegram Group Join Now

ಎಂ ಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ ಬಣದ ಕಾಂಗ್ರೆಸ್ ಕಾರ್ಯಕರ್ತರು ಅಡ್ಡ ಹಾಕಿ ಗಲಾಟೆ ಸೃಷ್ಟಿಸಿದ ಘಟನೆ ಲಿಂಗಸೂಗೂರು ತಾಲ್ಲೂಕು ಗೋರೆಬಾಳ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕೃಷಿ ಗೋದಾಮ ಉದ್ಘಾಟನೆ ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಎಂಎಲ್ ಸಿ ಶರಣಗೌಡ ಪಾಟೀಲ್ ಕಾರು ಹುಲಿಗೇರಿ ಬಣದ ಕಾರ್ಯಕರ್ತರು ತಡೆಯಿದ್ದು, ಇಬ್ಬರ ನಡುವೆಯೂ ಮಾತಿನ ಚಕಮಕಿ ನಡೆಯಿತು. ಈ ವೇಳೆ ಕಾರ್ಯಕರ್ತರು ನಾಯಕನ ವಿರುದ್ಧ ಘೋಷಣೆ ಕೂಗಿದರು.

ಉದ್ಘಾಟನೆ ಕಾರ್ಯಕ್ರಮದಲ್ಲಿ ಎಂಎಲ್ ಸಿ ಶರಣಗೌಡ ಅವರು ಲಿಂಗಸೂಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಗೋವಿಂದನಾಯಕ ಬಣದ ಕಾರ್ಯಕರ್ತರು ರೊಚ್ಚಿಗೆದ್ದು ವಾಗ್ವಾದ ಉಂಟಾಗಿದೆ.

ಈ ಸಂದರ್ಭದಲ್ಲಿ ಎರಡು ಗುಂಪಿನ ಮಧ್ಯೆ ವಾಕ್ಸಮರ ಏರ್ಪಟ್ಟು, ಗದ್ದಲ ಉಂಟಾಯಿತು. ಒಂದು ಹಂತದಲ್ಲಿ ಎರಡೂ ಬಣದ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದರು.

ಲಿಂಗಸಗೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ಮುಖಂಡರ ಅಂತರಕಲಹವು ಸೋಲಿಗೆ ಕಾರಣವಾಗಿದೆ. ಈ ಭಾಗದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಉಂಟಾದ ಅಸಮಾಧಾನ, ಪರಸ್ಪರ ಟೀಕೆಗಳು ಹಾಗೂ ಒಗ್ಗಟ್ಟಿನ ಕೊರತೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಿದೆ ಎಂದರು.
ವರದಿ: ಗಾರಲ ದಿನ್ನಿ ವೀರನ ಗೌಡ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!