ಬೆಳಗಾವಿ: ಜಿಲ್ಲೆಯಲ್ಲಿ ಚಲಿಸುತ್ತಿದ್ದಂತ ರೈಲೊಂದರಲ್ಲಿ, ಪ್ರಯಾಣಿಕರು ಅನುಮಾನಾಸ್ಪದವಾಗಿ ಪ್ರಜ್ಞೆ ತಪ್ಪಿ ಬಿದ್ದಿರೋ ಘಟನೆ ವರದಿಯಾಗಿದೆ. ಇವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ.
ಗೋವಾದಿಂದ ದೆಹಲಿಗೆ ತೆರಳುತ್ತಿದ್ದಂತ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲು ಬೆಳಗಾವಿಗೆ ರೈಲ್ವೆ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ, ಚಲಿಸುತ್ತಿದ್ದಂತ ರೈಲಿನಲ್ಲೇ ಪ್ರಯಾಣಿಕರು ಅನುಮಾನಾಸ್ಪದವಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾಗಿ ತಿಳಿದು ಬಂದಿದೆ.
ಈ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ, ಎಚ್ಚೆತ್ತುಕೊಂಡ ಪೊಲೀಸರು, ಪ್ರಜ್ಞೆ ತಪ್ಪಿ ಬಿದ್ದಂತ 8 ಪ್ರಯಾಣಿಕರನ್ನು ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಇವರಲ್ಲಿ ನಾಲ್ವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದು ಬಂದಿದೆ.
ಗಂಭೀರ ಸ್ಥಿತಿಯನ್ನು ಹೊಂದಿರುವಂತ ನಾಲ್ವರು ಪ್ರಯಾಣಿಕರಿಗೆ ಬಿಮ್ಸ್ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಇರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.
ಅಂದಹಾಗೇ ಗೋವಾದಿಂದ ದೆಹಲಿಗೆ ತೆರಳುತ್ತಿದ್ದಂತ ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸಹ ಪ್ರಯಾಣಿಕರು ನೀಡಿದಂತ ಆಹಾರ ಸೇವಿಸಿದ ಬಳಿಕ, 8 ಮಂದಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.