ನವದೆಹೆಲಿ: ಚುನಾವಣಾ ಆಯೋಗವು ಮೋದಿ ಸರ್ಕಾರದ ಕೈಗೊಂಬೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಸ್ಫೋಟಕ ಆರೋಪ ಮಾಡಿದ್ದಾರೆ.
ಪ್ರತಿಯೊಬ್ಬ ಚುನಾವಣಾ ಆಯುಕ್ತರು ಸರ್ಕಾರದ ಜೊತೆಗಿನ ಹೊಂದಾಣಿಕೆ ಮಾಡಿಕೊಂಡು ಹಿಂದಿನವರನ್ನು ಮೀರಿಸಿದ್ದಾರೆ ಎಂದು ಸಿಬಲ್ ಆರೋಪಿಸಿದ್ದಾರೆ.
ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ಟೀಕಿಸಿದ ಕಪಿಲ್ ಸಿಬಲ್, ಚುನಾವಣಾ ಆಯೋಗವು ಪೌರತ್ವದ ಸಮಸ್ಯೆ ನಿರ್ಧರಿಸುವ ಅಧಿಕಾರ ಹೊಂದಿಲ್ಲ ಎಂದು ಹೇಳಿದ್ದಾರೆ.
ಬಿಹಾರದಲ್ಲಿ 22 ವರ್ಷಗಳ ನಂತರ ಮತದಾರರ ಪರಿಷ್ಕರಣೆ ನಡೆಯುತ್ತಿದ್ದು, ಅನರ್ಹರನ್ನು ಪಟ್ಟಿಯಿಂದ ಹೊರಹಾಕಕಲಾಗುತ್ತಿದೆ. ಕಾನೂನಿನ ಪ್ರಕಾರ ಮತ ಚಲಾಯಿಸಲು ಅರ್ಹರಿಗೆ ಅವಕಾಶ ನೀಡುತ್ತದೆ ಎಂದು ಆಯೋಗ ಸಮರ್ಥಿಸಿಕೊಂಡಿದೆ.
ಸಂಸತ್ ಅಧಿವೇಶನದಲ್ಲಿ ಚರ್ಚೆಗೆ ಬೇರೆಲ್ಲದಕ್ಕಿಂತ ಹೆಚ್ಚಾಗಿ ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕು ಎಂದಿದ್ದಾರೆ. ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಆಧಾರ್, ಮತದಾರರ ಚೀಟಿ ಮತ್ತು ರೇಷನ್ ಕಾರ್ಡ್ ಪರಿಗಣಿಸುವಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.




