ನವದೆಹಲಿ : ಜನರ ಸಂಪತ್ತನ್ನು ಮುಸ್ಲಿಮರಿಗೆ ಹಂಚಲು ಕಾಂಗ್ರೆಸ್ ಹೊರಟಿದ್ದು, ಮಹಿಳೆಯರ ಮಂಗಳಸೂತ್ರವನ್ನೂ ಬಿಡಲ್ಲ ಎಂಬ ಪ್ರಧಾನಿ ಮೋದಿ ಅವರ ಹೇಳಿಕೆ ಸಂಬಂಧ ಕೇಂದ್ರ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದ್ದು, ಏ.29ರೊಳಗೆ ಉತ್ತರಿಸುವಂತೆ ಸೂಚಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಂಸಿಸಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಬಗ್ಗೆ ಭಾರತದ ಚುನಾವಣಾ ಆಯೋಗ (ಇಸಿಐ) ಗುರುವಾರ ಗಮನ ಮಹತ್ವದ ತೀರ್ಮಾನ ಮಾಡಿದೆ.ಚುನಾವಣಾ ಆಯೋಗವು ಏಪ್ರಿಲ್ 29ರ ಬೆಳಿಗ್ಗೆ 11ರೊಳಗೆ ಅವರ ಉತ್ತರಗಳನ್ನು ಕೋರಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎಂಸಿಸಿ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪವನ್ನು ಚುನಾವಣಾ ಆಯೋಗ ಗಮನಿಸಿದೆ. ಧರ್ಮ, ಜಾತಿ, ಸಮುದಾಯ ಅಥವಾ ಭಾಷೆಯ ಆಧಾರದ ಮೇಲೆ ದ್ವೇಷ ಮತ್ತು ವಿಭಜನೆಯನ್ನು ಉಂಟುಮಾಡುತ್ತಿದೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಆರೋಪಗಳನ್ನು ಎತ್ತಿದ್ದವು. ಏಪ್ರಿಲ್ 29 ರಂದು ಬೆಳಿಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ.