Join The Telegram | Join The WhatsApp |
ಹಾರೂಗೇರಿ : ತಾಲೂಕ ಆಡಳಿತ ರಾಯಬಾಗ್, ಪುರಸಭೆ ಕಾರ್ಯಾಲಯ ಹಾರೂಗೇರಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಭಾಗಿತ್ವದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಜಾಗೃತಿಯ ಅಭಿಯಾನವನ್ನು ಹಾರೂಗೇರಿ ಪಟ್ಟಣದಾದ್ಯಂತ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪುರಸಭೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದ ಶ್ರೀ ಜೀ ವಿ ಹನ್ನೀಕೇರಿ ಅವರು ಮಾತನಾಡಿ, ಭಾರತೀಯರಾದ ನಾವೆಲ್ಲರೂ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಂಡು ಹಾಗೂ ಅದರ ಪರಿಸ್ಕರಣೆಯನ್ನು ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ಜೊತೆಗೆ ಮತ ಚಲಾಯಿಸುವುದರ ಮುಖಾಂತರ ಭವ್ಯ ಭಾರತದ ನಿರ್ಮಾಣಕ್ಕೆ, ಸೂಕ್ತವಾದ ನಾಯಕರುಗಳನ್ನು ಆಯ್ಕೆ ಮಾಡಿಕೊಳ್ಳುವಿಕೆಯಲ್ಲಿ ಮತದಾನ ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್ ಬಿ ಕೊಕಟನೂರ, ಪುರಸಭೆ ಸಿಬ್ಬಂದಿ, ಇ ಎಲ್ ಸಿ ಸಂಯೋಜಕರಾದ ಪ್ರಕಾಶ್ ಅಂಬಲಿ, ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ, ಹಾಗೂ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವರದಿ : ಅಪ್ಪಾಸಾಹೇಬ ಮಾದರ
Join The Telegram | Join The WhatsApp |