ಬೀದರ್ : ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಅಕ್ಟೋಬರ್ 11 ರಂದು ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆಯಲಿದೆ.
ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು, ಕಾರ್ಯಕಾರಿ ಮಂಡಳಿ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಎಲ್ಲ ತಾಲ್ಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ತಪ್ಪದೇ ಭಾಗವಹಿಸಬೇಕು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಮನವಿ ಮಾಡಿದ್ದಾರೆ.
ವರದಿ: ಸಂತೋಷ ಬಿಜಿ ಪಾಟೀಲ




