ಬೆಳಗಾವಿ : ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಿರಿಕ್ ಆಗಿ ಈ ಜಗಳ ಅತಿರೇಕಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರ ಎಂಬಲ್ಲಿ ಈ ಹತ್ಯೆ ನಡೆದಿದ್ದು, ಕೊಲೆಯಾದ ಯುವಕನನ್ನು ಯಾಸಿನ್ ಜಾತಗಾರ (22) ಎಂದು ಗುರುತಿಸಲಾಗಿದೆ.
ಇನ್ನು ಕೊಲೆ ಆರೋಪಿಯನ್ನು ರೋಹಿತ್ ಜಾಧವ್ ಎಂದು ತಿಳಿದುಬಂದಿದ್ದು, ಯಾಸಿನ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಬಳಿಕ ತಾನಾಗಿಯೇ ಪೊಲೀಸರಿಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.