ಚೆಸ್ಟರ್ ಲೀ ಸ್ಟ್ರೀಟ್ ( ಇಂಗ್ಲೆಂಡ್): ಆತಿಥೇಯ ಇಂಗ್ಲೆಂಡ್ ಕ್ರಿಕೆಟ್ ತಂಡ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ಮೊದಲ ಟ್ವೆಂಟಿ-20 ಕ್ರಿಕೆಟ್ ಪಂದ್ಯದಲ್ಲಿ 21 ರನ್ ಗಳಿಂದ ಗೆಲುವು ಸಾಧಿಸಿದೆ.
ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಗೆ 188 ರನ್ ಗಳಿಸಿತು. ಜೋಶ್ ಬಟ್ಲರ್ 96 ರನ್ ಗಳಿಸಿದರು. ಇದಕ್ಕೆ ಪ್ರತಿಯಾಗಿ ಆಡಿದ ವೆಸ್ಟ್ ಇಂಡೀಸ್ ತಂಡ 9 ವಿಕೆಟ್ ಗೆ 167 ರನ್ ಗಳನ್ನು ಮಾತ್ರ ಗಳಿಸಿ ಸೋಲನುಭವಿಸಿತು.




