Ad imageAd image

2 ತಿಂಗಳು ವಿಜಯಪುರ ಜಿಲ್ಲೆಗೆ ಕಾಡಸಿದ್ದೇಶ್ವರ ಸಾಮೀಜಿಗೆ ಪ್ರವೇಶ ನಿರ್ಬಂಧ

Bharath Vaibhav
2 ತಿಂಗಳು ವಿಜಯಪುರ ಜಿಲ್ಲೆಗೆ ಕಾಡಸಿದ್ದೇಶ್ವರ ಸಾಮೀಜಿಗೆ ಪ್ರವೇಶ ನಿರ್ಬಂಧ
WhatsApp Group Join Now
Telegram Group Join Now

ವಿಜಯಪುರ: ಲಿಂಗಾಯಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ಅವಹೇಳನ ಮತ್ತು ಧರ್ಮದ ಹೆಸರಲ್ಲಿ ವಿಭಜನೆ ಮಾಡುವ ಅಸಂವಿಧಾನಿಕ ಭಾಷೆ ಬಳಕೆ ಆರೋಪದಲ್ಲಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸಾಮೀಜಿ ಅವರಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಎರಡು ತಿಂಗಳ ಕಾಲ ವಿಜಯಪುರ ಜಿಲೆ ಪ್ರವೇಶ ಮಾಡದಂತೆ ಜಿಲ್ಲಾಧಿಕಾರಿ ಡಾ.ಆನಂದ್ ಆದೇಶ ಹೊರಡಿಸಿದ್ದಾರೆ.ಇಂದಿನಿಂದ ಡಿಸೆಂಬರ್ 14ರವರೆಗೆ ಸ್ವಾಮೀಜಿ ವಿಜಯಪುರ ಜಿಲ್ಲೆ ಪ್ರವೇಶ ನಿಷೇಧಿಸಲಾಗಿದೆ.

ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ನಡೆದ ಸಮಾರಂಭದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಕೆಲ ಲಿಂಗಾಯಿತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ಕೆಲ ತಿಂಗಳಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಕೆಲ ಲಿಂಗಾಯಿತ ಒಕ್ಕೂಟ ಸ್ವಾಮೀಜಿಗಳು ಹೇಳುತ್ತಿದ್ದಾರೆ.

ಬಸವ ಸಂಸ್ಕೃತಿಯ ಅಭಿಯಾನ ಎನ್ನುವ ನಾಟಕವಾಡುತ್ತಿದ್ದಾರೆ. ಇವರಿಗೆ ನಾನೇ ಬುದ್ಧಿ ಹೇಳಬೇಕು ಎಂದಿದ್ದರು. ಸ್ವಾಮೀಜಿಗಳ ಹೇಳಿಕೆಗೆ ಹಲವೆಡೆ ಭಾರಿ ವಿರೋಧ ವ್ಯಕ್ತವಾಗಿತ್ತು, ಈ ಹಿನ್ನೆಲೆಯಲ್ಲಿ ವಿಜಯಪುರಕ್ಕೆ ಸ್ವಾಮೀಜಿ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!