ಮಲ್ಲಮನ ಬೆಳವಡಿ: ಬೈಲಹೊಂಗಲ ತಾಲೂಕಿನ ದೊಡ್ಡವಾಡ ವಲಯದ ಸರಕಾರಿ ಕನ್ನಡ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂಗೀತ ಮೇಡಂ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ದೊಡವಾಡ ಗ್ರಾಮದ ಸಮಾಜಸೇವಕರಾದ ಮಲ್ಲಪ್ಪ ಎರಿ ಕಿತ್ತೂರು ಮುಂದಿನ ಪೀಳಿಗೆಯ ಜನರಿಗೆ ನಾವು ಪರಿಸರವನ್ನು ಕೊಡುಗೆಯಾಗಿ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷರು, ಶಾಲೆಯ ಎಲ್ಲಾ ಶಿಕ್ಷಕರು, ಒಕ್ಕೂಟದ ಅಧ್ಯಕ್ಷರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು ಈ ಕಾರ್ಯಕ್ರಮವನ್ನು ತಾಲೂಕಿನ ಕೃಷಿ ಮೇಲ್ವಿಚಾರಕರು ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿ ಎಲ್ಲ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸೇವ ಪ್ರತಿನಿಧಿಗಳು ಉಪಸ್ಥಿತರಿದ್ದರು.
ವರದಿ: ದುಂಡಪ್ಪ ಹೂಲಿ




