Join The Telegram | Join The WhatsApp |
ಬಾಗಲಕೋಟೆ: ಕಾಂಗ್ರೆಸ್‌ನನ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ಗುಂಪುಗಾರಿಕೆ ತಡೆಯುವಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿಫಲವಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಟೀಕಿಸಿದರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬಗ್ಗೆ ಮಾತನಾಡುವುದನ್ನು ಬಿಟ್ಟು ಕಾಂಗ್ರೆಸ್ ಕಟ್ಟುವ ಕೆಲಸ ಮಾಡಲಿ ಎಂದು ಸಲಹೆ ಮಾಡಿದರು. ದೆಹಲಿಗೆ ಕರೆದು ಮಲ್ಲಿಕಾರ್ಜುನ ಖರ್ಗೆಯವರು ಒಂದಾಗಿ ಹೋಗಲು ತಿಳಿಸಿದ್ದಾರೆ. ಬೆಂಗಳೂರಿಗೆ ಬರುತ್ತಿದ್ದಂತೆಯೇ ಮತ್ತೇ ಹಳೆ ಚಾಳಿ ಮುಂದುವರಿಸಿದ್ದಾರೆ. ಗೆಲ್ಲುವ ಮುಂಚೆಯೇ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ಟೀಕಿಸಿದರು. ಬಿಎಸ್ ವೈ ಕಡೆಗಣಿಸಲಾಗುತ್ತಿದೆಯೇ ಎಂಬ ಪ್ರಶ್ನೆಗೆ, ಅದೆಲ್ಲ ಊಹಾಪೋಹ. ಕೊಪ್ಪಳ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ ಎಂದರು.
Join The Telegram | Join The WhatsApp |