Ad imageAd image

ರಾಜ್ಯದಲ್ಲಿ ಹೊಸದಾಗಿ ಸೈಬರ್ ಕಮಾಂಡ್ ಘಟಕ ಸ್ಥಾಪನೆ 

Bharath Vaibhav
ರಾಜ್ಯದಲ್ಲಿ ಹೊಸದಾಗಿ ಸೈಬರ್ ಕಮಾಂಡ್ ಘಟಕ ಸ್ಥಾಪನೆ 
vidhan soudha
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ಸೈಬರ್ ಕಮಾಂಡ್ ಘಟಕವನ್ನು ಸ್ಥಾಪಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಪತ್ರಗಳಲ್ಲಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ವಿಜ್ಞಾನ ಹಾಗೂ ತಂತ್ರಜ್ಞಾನದ ಬಳಕೆಯು ಮಾನವನ ಜೀವನ ಶೈಲಿಯನ್ನು ಅತ್ಯಂತ ಸರಳೀಕರಣಗೊಳಿಸಿದ್ದು, ದೈನಂದಿನ ಜೀವನದಲ್ಲಿ ತಂತ್ರಜ್ಞಾನದ ಅತಿಯಾದ ಬಳಕೆ ಹಾಗೂ ಅವಲಂಬನೆಯಿಂದಾಗಿ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿದ್ದು, ಹಳೆಯ ವೃತ್ತಿಪರ ಅಪರಾಧಗಳಾದ ಡಕಾಯಿತಿ, ರಾಬರಿ ಹಾಗೂ ಇತರೆ ಭೌತಿಕ ಕಳ್ಳತನಗಳನ್ನು ಹಿಂದಿಕ್ಕಿ ಅತಿ ಹೆಚ್ಚು ಸೈಬರ್ ಅಪರಾಧಗಳು ವರದಿಯಾಗುತ್ತಿದ್ದು ಮಹಾನಗರಗಳಲ್ಲಿ ದಾಖಲಾಗುವ ಅಪರಾಧ ಪ್ರಕರಣಗಳಲ್ಲಿ ಶೇ.20ರಷ್ಟು ಸೈಬರ್ ಪ್ರಕರಣಗಳಾಗಿದ್ದು, ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ ಒಟ್ಟಾರೆಯಾಗಿ 52,000 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿದ್ದು ಕರ್ನಾಟಕ ರಾಜ್ಯವು ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ದಾಖಲಾಗುವ ಸೈಬರ್ ಅಪರಾಧಗಳ ಸಂಖ್ಯೆಯಲ್ಲಿ ಮಂಚೂಣಿಯಲ್ಲಿರುವುದರಿಂದ ಕರ್ನಾಟಕ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ರಾಜ್ಯದಲ್ಲಿ ಪ್ರತ್ಯೇಕ ಸೈಬರ್ ಅಪರಾಧ ತಡೆ ಘಟಕ (Cyber Crimes Prevention Unit) ಅನ್ನು ಸೃಜಿಸುವ ಅವಶ್ಯಕತೆ ಕಂಡುಬರುತ್ತದೆಂದು ತಿಳಿಸಿರುತ್ತಾರೆ.

ರಾಜ್ಯದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 43 ಸಿ.ಇ.ಎನ್ (ಸೈಬರ್, ಎಕನಾಮಿಕ್ಸ್ & ನಾರ್ಕೋಟಿಕ್ಸ್) ಪೊಲೀಸ್ ಠಾಣೆಗಳನ್ನು ಸೈಬರ್ ಅಪರಾಧ ಪೊಲೀಸ್ ಠಾಣೆಗಳೆಂದು ಮರುಪದನಾಮೀಕರಿಸಿ ಹಾಗೂ ಪ್ರಸ್ತುತ ಡಿಜಿಪಿ, ಸಿ.ಐ.ಡಿ ರವರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಮಟ್ಟದ ವ್ಯಾಪ್ತಿಯನ್ನು ಹೊಂದಿರುವ ಸೈಬರ್ ಅಪರಾಧ ಪೊಲೀಸ್ ಠಾಣೆ ಹಾಗೂ ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಬೆಂಗಳೂರು ನಗರ ವ್ಯಾಪ್ತಿಯನ್ನು ಒಳಗೊಂಡಿರುವ ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ಒಟ್ಟಾರೆ 45 ಪೊಲೀಸ್ ಠಾಣೆಗಳನ್ನು ಪ್ರಸ್ತಾಪಿತ ಸೈಬರ್ ಅಪರಾಧ ತಡೆ ಘಟಕದ (Cyber Crimes Prevention Unit) ಅಧೀನಕ್ಕೆ ಒಳಪಡಿಸುವಂತೆ ಕೋರಿರುತ್ತಾರೆ.ಸಿ.ಇ.ಎನ್ ಪೊಲೀಸ್ ಠಾಣೆಗಳಲ್ಲಿ ಕೆಳಕಂಡ ನಿಯಮ/ಅಧಿನಿಯಮಗಳಡಿಯಲ್ಲಿ ಪ್ರಕರಣ ದಾಖಲಿಸಿ ಅಗತ್ಯ ಕ್ರಮ ವಹಿಸಲು ಸರ್ಕಾರದ ಅಧಿಸೂಚನೆಗಳನ್ವಯ ಅಧಿಕಾರ ನೀಡಲಾಗಿದೆ ಎಂದು ತಿಳಿಸಿರುತ್ತಾರೆ:-

WhatsApp Group Join Now
Telegram Group Join Now
Share This Article
error: Content is protected !!