ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ನಾಗರಿಕರಲ್ಲಿ ಸಂವಿಧಾನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸಂವಿಧಾನದ ಬಗ್ಗೆ ವಿವಿಧ ಸೆಮಿನಾರ್‌ಗಳು, ಚರ್ಚೆಗಳು ಹಾಗೂ ಸಂಶೋಧನಾ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶದಿಂದ ಮೈಸೂರು ವಿಶ್ವವಿದ್ಯಾಲಯದಲ್ಲಿ ರೂ.10 ಕೋಟಿ ವೆಚ್ಚದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.




