Ad imageAd image

500 ಕೋಟಿ ಕೊಟ್ಟರೂ ನಮ್ಮ ಶಾಸಕರನ್ನು ಖರೀದಿಸಲು ಆಗಲ್ಲ : ಎಂ. ಬಿ ಪಾಟೀಲ್ 

Bharath Vaibhav
500 ಕೋಟಿ ಕೊಟ್ಟರೂ ನಮ್ಮ ಶಾಸಕರನ್ನು ಖರೀದಿಸಲು ಆಗಲ್ಲ : ಎಂ. ಬಿ ಪಾಟೀಲ್ 
MB PATIL
WhatsApp Group Join Now
Telegram Group Join Now

ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನ ನಡೆಸಿದ್ದು, ನೂರು ಕೋಟಿ ಆಫರ್ ಮಾಡಿದೆ ಎಂಬ ವಿಚಾರವಾಗಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, 500 ಕೋಟಿ ಕೊಟ್ಟರೂ ನಮ್ಮ ಶಾಸಕರನ್ನು ಖರೀದಿಸಲು ಆಗಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ನೂರಲ್ಲ ಐನೂರು ಕೋಟಿ ಕೊಟ್ಟರೂ ನಮ್ಮ ಶಾಸಕರು ಬಿಜೆಪಿಗೆ ಮಾರಾಟವಾಗಲ್ಲ.ಆಪರೇಷನ್ ಕಮಲ ಸಾಧ್ಯವೂ ಇಲ್ಲ ಎಂದು ತಿಳಿಸಿದರು.

ನಮ್ಮ ಯಾವ ಶಾಸಕರೂ ಆಮಿಷಕ್ಕೆ ಬಲಿಯಾಗಲ್ಲ. 136 ಸ್ಥಾನ ಪಡೆದು ಭಾರಿ ಬಹುಮತದಿಂದ ಸರ್ಕಾರ ರಚನೆ ಮಾಡಿದ್ದೇವೆ. 10-12 ಬಿಜೆಪಿ-ಜೆಡಿಎಸ್ ಶಾಸಕರು ಕಾಂಗ್ರೆಸ್ ಜೊತೆ ಗುರುತಿಸಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಸರ್ಕಾರವನ್ನು ಕೆಡವಲು ಸಾಧ್ಯವಿಲ್ಲ. ಆಪರೇಷನ್ ಕಮಲ ವರ್ಕೌಟ್ ಆಗಲ್ಲ ಎಂದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!