ಕಣಕುಂಬಿ:- ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಮಲಪ್ರಭಾ ನದಿಯ ಉಗಮ ಸ್ಥಳ ಕಣಕುಂಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಣಕುಂಬಿ,ಚಿಗಳೆ, ಬೇಟಣಿ, ಪಾರವಾಡ,ಚಿಕಳೆ, ಮಾನ, ಹುಲುಂಡ, ಚೋರ್ಲಾ ಸೇರಿದಂತೆ ಹಲವಾರು ಅರಣ್ಯ ಪ್ರದೇಶದ ಗ್ರಾಮಗಳಲ್ಲಿ ಪ್ರತಿವರ್ಷ ಮಳೆಗಾಲದ ಸಂದರ್ಭದಲ್ಲಿ ವಿದ್ಯುತ್ ಕಂಬಗಳ ಮೇಲೆ ಹೆಚ್ಚಾಗಿ ಮರಗಳು ಬಿದ್ದು, ತಂತಿಗಳು ಕಟ್ಟಾಗಿ, ವಾರಗಳ ಗಟ್ಟಲೇ ವಿದ್ಯುತ್ ಸಂಪರ್ಕವೇ ಇರುವುದಿಲ್ಲಾ, ಇನ್ನೂ ಇವುಗಳನ್ನು ದುರಸ್ತಿ ಮಾಡಿ ತುರ್ತಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಇಂಧನ ಇಲಾಖೆಯ ಪವರ್ ಮೆನ್ ಗಳ ಕೊರತೆ ಇರುತ್ತದೆ.
ಇದರಿಂದ ಪ್ರತಿವರ್ಷವೂ ಈ ಸಮಸ್ಯೆ ಜ್ವಲಂತ ಸಮಸ್ಯೆಯಾಗಿ ಮಾರ್ಪಟ್ಟಿದೆ. ಆದ್ದರಿಂದ ಮೊನ್ನೆ ಕಣಕುಂಬಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸರ್ವ ಸದಸ್ಯರು ಒಟ್ಟಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ಭೇಟಿ ಮಾಡಿ ಈ ಸಮಸ್ಯೆಯ ಬಗ್ಗೆ ಹೇಳಿಕೊಂಡರು.
ಸದರಿ ಈ ವಿಷಯದ ಬಗ್ಗೆ ಸಮಗ್ರವಾಗಿ ವರದಿ ಮಾಡಿ ಹೆಸ್ಕಾಂ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯ ನಿರ್ವಾಹಕ ಅಭಿಯಂತರರು ಗಮನಕ್ಕೆ ತೆಗೆದುಕೊಂಡು ಬಂದು ಅಭಿಪ್ರಾಯ ಸಂಗ್ರಹಿಸಿ ಬೆಳಕು ಚೆಲ್ಲುವ ಕೆಲಸ ಮಾಡಿದ್ದಾರೆ. ಇನ್ನಾದ್ರೂ ಈ ಭಾಗಕ್ಕೆ ವಿದ್ಯುತ್ ಸೌಲಭ್ಯ ಸಮರ್ಪಕವಾಗಿ ದೊರಕುವುದೇ ಎಂಬುದನ್ನು ಕಾದುನೋಡಬೇಕಿದೆ.
ವರದಿ:- ಬಸವರಾಜು