Ad imageAd image

ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ.ನನಗೂ ಇದೆ : ಜಮೀರ್ ಅಹ್ಮದ್ 

Bharath Vaibhav
ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ.ನನಗೂ ಇದೆ : ಜಮೀರ್ ಅಹ್ಮದ್ 
WhatsApp Group Join Now
Telegram Group Join Now

ಹುಬ್ಬಳ್ಳಿ : ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವಿ ದೇಶಪಾಂಡೆ ಹೇಳಿಕೆ ನೀಡಿದ್ದಾರೆ.

ಈ ಒಂದು ಹೇಳಿಕೆಗೆ ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದು, ಎಲ್ಲರಿಗೂ ಸಿಎಂ ಆಗಬೇಕೆಂಬ ಆಸೆ ಇರುತ್ತದೆ.ನನಗೂ ಸಿಎಂ ಆಗಬೇಕೆಂಬ ಆಸೆ ಇರಲ್ವಾ ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಆಗಬೇಕು ಅನ್ನುವ ಆಸೆ ಯಾರಿಗೆ ಇರಲ್ಲ ಹೇಳಿ? ನನಗೂ ಸೇಮ್ ಆಗಬೇಕು ಅಂತ ಆಸೆ ಇರಲ್ವಾ? ಎಲ್ಲರಿಗೂ ಆಸೆ ಇರುತ್ತೆ ಅದು ತಪ್ಪಲ್ಲ. ಸದ್ಯ ಸಿದ್ದರಾಮಯ್ಯನವರೇ ರಾಜ್ಯದ ಮುಖ್ಯಮಂತ್ರಿ ಎಂದು ಹುಬ್ಬಳ್ಳಿಯಲ್ಲಿ ಸತಿ ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದರು.

ಇದಕ್ಕೂ ಮೊದಲು ಆರ್ ವಿ ದೇಶಪಾಂಡೆ ಸಿದ್ದರಾಮಯ್ಯ ಅನುಮತಿ ನೀಡಿದರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಆದರೆ ಸದ್ಯ ಅಂತ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ. ನಾನು ಸಿಎಂ ಆಗುವುದಕ್ಕೆ ಹೊರಿಸ್ಥರು ಅನುಮತಿ ನೀಡಿದರು ಸಿದ್ದರಾಮಯ್ಯ ಅನುಮತಿ ನೀಡಬೇಕು.

ಸಿದ್ದರಾಮಯ್ಯಗಿಂತ ನಾನು ಎರಡು ವರ್ಷ ದೊಡ್ಡವನು. ಅಲ್ಲದೆ ಸಿದ್ದರಾಮಯ್ಯ ನಾನು ಒಳ್ಳೆಯ ಸ್ನೇಹಿತರು ಎಂದು ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!