ರಾಯಚೂರು : ಜಿಲ್ಲಾಡಳಿದೊಂದಿಗೆ ಕೈಜೋಡಿಸಬೇಕು. ಸಾರ್ವಜನಿಕರು ಯಾವುದೇ ರೀಯಿಯ ಭಯ ಪಡಬಾರದು ಎಂದರು.
ಜನರ ರಕ್ಷಣೆ ಉದ್ದೇಶ: ಕೇಂದ್ರ ಸರ್ಕಾರದ ಆದೇಶದಂತೆ ಹಾಗೂ ರಾಜ್ಯ ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಅಣುಕು ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು, ಅಣಕು ಪ್ರದೇಶದ ಮುಖ್ಯ ಉದ್ದೇಶವು ಶತ್ರು ದೇಶಗಳಿಂದ ದಾಳಿಯಾದ ಸಂದರ್ಭದಲ್ಲಿ ಸಾರ್ವಜನಿಕರ ರಕ್ಷಣೆ ಕ್ರಮಕ್ಕೆ ಸಂಬಂಧಿಸಿದ್ದಾಗಿರುತ್ತದೆ ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಹೇಳಿದರು.
ತುರ್ತು ಪರಿಸ್ಥಿತಿ ವೇಳೆ ವಿವಿಧ ಇಲಾಖೆಗಳಿಂದ ಯಾವ ರೀತಿಯಲ್ಲಿ ಕಾರ್ಯನಿರ್ವಹಣೆ ಮಾಡಬೇಕು. ಸಾರ್ವಜನಿಕರು ಯಾವ ರೀತಿಯಲ್ಲಿ ಇರಬೇಕು ಎಂಬುದನ್ನು ತಿಳಿಸಲು ಬೇರೆ ಬೇರೆ ಇಲಾಖೆಗಳು ಮತ್ತು ಭದ್ರತಾ ಪಡೆಯ ತಂಡಗಳು ಹೇಗೆ ಕಾರ್ಯನಿರ್ವಹಣೆ ಮಾಡಬೇಕು ಮತ್ತು ಎಂತಹದ್ದೇ ಪರಿಸ್ಥಿತಿ ಎದುರಾದರು ಸಹ ಎಲ್ಲರೂ ಸೇರಿ ಅದನ್ನು ಹೇಗೆ ನಿಭಾಯಿಸಬೇಕು ಎಂಬುದರ ಪೂರ್ವ ತಯಾರಿ ಇದಾಗಿದೆ ಎಂದು ತಿಳಿಸಿದರು. ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಅಣುಕು ಪ್ರದರ್ಶನ ಮಾಡಬೇಕು.
ಸಾರ್ವಜನಿಕರಲ್ಲಿ ಯಾವುದೇ ರೀತಿಯಲ್ಲಿ ಗೊಂದಲ ಹಾಗೂ ಅಂಜಿಕೆ ಇರಬಾರದು. ಜಿಲ್ಲಾಡಳಿತವು ಈಗಾಗಲೇ ಎಲ್ಲಾ ರೀತಿಯ ಸಿದ್ದತೆಯನ್ನು ಮಾಡಿಕೊಂಡಿದೆ. ದೇವಸಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 5-6 ಹಳ್ಳಿಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತರಬೇತಿ ನೀಡಲಾಗುವುದು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಕಂಟ್ರೋಲ್ ರೋಂ ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆಯಬೇಕು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಎನ್.ಸಿ.ಸಿ, ವಿದ್ಯಾರ್ಥಿಗಳು ಇದ್ದರು.
ಪತ್ರಕರ್ತರಿಗೆ ವೀಕ್ಷಣೆಗೆ ಅವಕಾಶ: ಯಾವುದೇ ಮಹತ್ವದ ವಿಷಯಗಳ ಬಗ್ಗೆ ಜನಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೆ ಸಹ ಅಣುಕು ಪ್ರದರ್ಶನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.
ವರದಿ : ಗಾರಲ ದಿನ್ನಿ ವೀರನ ಗೌಡ




