ಬೀದರ್: ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾ ಸಭೆ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಶತಾಯುಷಿ ೧೦೨ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷಿಣಿಸಿದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಿಂದ ಅವರ ಮನೆಗೆ ಸ್ಥಳಾಂತರಿಸಲಾಗಿದೆ.
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿರುವ ಅವರಿಗೆ ಜೀವ ರಕ್ಷಕಗಳ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿರುವ ಅವರ ಆರೋಗ್ಯದಲ್ಲಿ ಶನಿವಾರ ಚೇತರಿಕೆ ಕಂಡು ಬಂದಿತ್ತು. ಆದರೆ ನಂತರ ಮತ್ತೇ ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿರುವವ ಕಾರಣಕ್ಕೆ ಅವರನ್ನು ಖಾಸಗಿ ಆಸ್ಪತ್ರೆಯಿಂದ ಮನೆಗೆ ಸ್ಥಳಾಂತರಿಸಲಾಗಿದೆ. ಅವರ ಮಗ ಸಚಿವ ಈಶ್ವರ ಖಂಡ್ರೆ ಅವರು ಹಲವಾರು ಬಾರಿ ಆಸ್ಪತ್ರೆಗೆ ಭೇಟಿ ನೀಡಿ ತಂದೆಯವರ ಆರೋಗ್ಯ ಸ್ಥಿತಿ ವಿಚಾರಿಸಿದ್ದರು.
ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ಮತ್ತಷ್ಟು ಕ್ಷೀಣ: ಆಸ್ಪತ್ರೆಯಿಂದ ಮನೆಗೆ ಸ್ಥಳಾಂತರ




