Ad imageAd image

ಚಿನ್ನ ಖರೀದಿಸಿ 2 ಕೋಟಿಗೂ ಹೆಚ್ಚು ವಂಚನೆ : ಮಾಜಿ ಸಚಿವರ ಆಪ್ತೆ ಅರೆಸ್ಟ್ 

Bharath Vaibhav
WhatsApp Group Join Now
Telegram Group Join Now

ಬೆಂಗಳೂರು : ಚಿನ್ನ ಖರೀದಿಸಿ 2 ಕೋಟಿಗೂ ಹೆಚ್ಚು ವಂಚನೆ ಎಸಗಿದ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪೊಲೀಸರು ಬಂಧಿಸಿದ್ದಾರೆ.

ಗಣ್ಯರ ಹೆಸರು ಬಳಸಿಕೊಂಡು ಕೋಟ್ಯಾಂತರ ರೂ ಮೌಲ್ಯದ ಹಣ ಪಾವತಿಸದೇ ವಂಚಿಸಿದ ಮಾಜಿ ಸಚಿವರ ಸ್ನೇಹಿತೆಯನ್ನು ಪುಲಕೇಶಿ ನಗರದ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಶ್ವೇತಾಗೌಡ ಎಂದು ಆಭರಣ ಖರೀದಿಸಿ ಆಕೆ ವಂಚಿಸುತ್ತಿದ್ದಳು.

ನವರತ್ನ ಜ್ಯುವೆಲರ್ಸ್ ಮಳಿಗೆಯಲ್ಲಿ ಶ್ವೇತಾ – ಖರೀದಿಸಿದ್ದ 2.945 ಕೆಜಿ ಚಿನ್ನವನ್ನು ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಹಾಗೂ ಕೋಲಾರ ಜಿಲ್ಲಾ ಬಿಜೆಪಿ ಮುಖಂಡ ವರ್ತೂರು ಪ್ರಕಾಶ್ ಮನೆಗೆ, ಅಂಗಡಿ ಸಿಬ್ಬಂದಿ ತಲುಪಿಸಿದ್ದರು. ಶ್ವೇತಾ ಮಾಜಿ ಸಚಿವರ ಮನೆ ವಿಳಾಸವನ್ನೇ ಕೊಟ್ಟಿದ್ದಳು. ಸದ್ಯ ವರ್ತೂರು ಪ್ರಕಾಶ್ ಗೂ ಪೊಲೀಸರು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.

ಆರೋಪಿಯಿಂದ ಚಿನ್ನ, ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ತಾನು ಚಿನ್ನಾಭರಣ ವ್ಯಾಪಾರ ಮಾಡುವುದಾಗಿ ಎಂದು ಹೇಳಿ ಕೆಲ ಚಿನ್ನ ವ್ಯಾಪಾರಿಗಳಿಂದ ಸಗಟು ದರದಲ್ಲಿ ಆಭರಣ ಖರೀದಿಸಿ ಆಕೆ ವಂಚಿಸುತ್ತಿದ್ದಳು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!