Ad imageAd image

ಕಾಂಗ್ರೆಸ್ ಐದು ಗ್ಯಾರಂಟಿ ಕೊಟ್ಟಿದ್ದು ಗಮನಿಸಿ ಕಾಂಗ್ರೆಸ್ಸಿಗೆ ಮತ ನೀಡಿ : ಮಾಜಿ ಶಾಸಕ ಆರ್ ಮಂಜುನಾಥ್

Bharath Vaibhav
ಕಾಂಗ್ರೆಸ್ ಐದು ಗ್ಯಾರಂಟಿ ಕೊಟ್ಟಿದ್ದು ಗಮನಿಸಿ ಕಾಂಗ್ರೆಸ್ಸಿಗೆ ಮತ ನೀಡಿ : ಮಾಜಿ ಶಾಸಕ ಆರ್ ಮಂಜುನಾಥ್
WhatsApp Group Join Now
Telegram Group Join Now

ಬೆಂಗಳೂರು: ಪೀಣ್ಯ ದಾಸರಹಳ್ಳಿ ಇದೆ ತಿಂಗಳ 26ರಂದು ಮೊದಲು ಹಂತದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜೀವ್ ಗೌಡರ ಪರವಾಗಿ ದಾಸರಹಳ್ಳಿ ಕ್ಷೇತ್ರದ ಹೆಗ್ಗನಹಳ್ಳಿ  ವಾರ್ಡಿನಲ್ಲಿ ಮಾಜಿ ಶಾಸಕ ಆರ್ ಮಂಜುನಾಥ್, ವಾರ್ಡ ಪ್ರಭಾವಿ ನಾಯಕ ಮಂಜುನಾಥ್ ಶಾಮಣ್ಣ, ಹೆಗನಹಳ್ಳಿ ವಾರ್ಡಿನ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಮಹಿಳೆಯರ ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ  ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು ನಂತರ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 11 ತಿಂಗಳಲ್ಲಿ ಜನರಿಗೆ ನೀಡಿದ ಆಶ್ವಾಸನೆಯನ್ನು 5 ಗ್ಯಾರೆಂಟಿಗಳನ್ನು ಈಡೇರಿಸುವುದರ ಮೂಲಕ ನುಡಿದಂತೆ  ನಡೆದಿದ್ದು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್  ಗೌಡರನ್ನು  ಹೆಚ್ಚಿನ ಬಹುಮತದಿಂದ ಗೆಲ್ಲಿಸುವುದರ ಮೂಲಕ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್ ಮಂಜುನಾಥ್ ಪಕ್ಷದ  ಕಾರ್ಯಕರ್ತರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಬೆಂಗಳೂರು ಜಿಲ್ಲಾ ಅಧ್ಯಕ್ಷ ವಾಜೀದ್, ಮಾಜಿ ನಗರಸಭಾ ಸದಸ್ಯ ಜಿಮ್. ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ  ಜಯರಾಂ ನರಸಿಂಹ, ನಂಜಪ್ಪ, ಬಸೀರ್, ವೈ.ಕೆ ಸುರೇಶ್ ,  ವಸಂತ,  ಚಂದ್ರು, ಅಚ್ಚು ಸುರೇಶ್ ,ಮಹಿಳಾ ಮುಖ್ಯಸ್ಥೆ ರೇಖಾ, ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು, ಮಹಿಳೆಯರು ಕಾರ್ಯಕರ್ತರು ಇದ್ದರು.

ವರದಿ : ಅಯ್ಯಣ್ಣ ಮಾಸ್ಟರ್

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!