ಬೆಂಗಳೂರು : ವೈಫ್ ಸ್ವಾಪಿಂಗ್ ಸದ್ದು ಮಾಡಿದ್ದ ಬೆನ್ನಲ್ಲೇ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಸ್ವಾಪಿಂಗ್ ಜಾಲವನ್ನ ಪೊಲೀಸರು ಭೇದಿಸಿದ್ದಾರೆ.
ಈ ಸಂಬಂಧ ಹರೀಶ್ ಹಾಗೂ ಹೇಮಂತ್ ಎಂಬುವರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ . ಗರ್ಲ್ ಫ್ರೆಂಡ್ ಗಳನ್ನ ಇಬ್ಬರು ಎಕ್ಸ್ ಚೇಂಜ್ ಮಾಡುತ್ತಿದ್ದರು.ಅಲ್ಲದೆ ಯುವತಿಯರಿಗೆ ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದದ್ದು ಸಹ ಪೊಲೀಸರ ವಿಚಾರಣೆ ವೇಳೆ ಗೊತ್ತಾಗಿದೆ.
ವಾಟ್ಸಾಪ್ ಗ್ರೂಪ್ ಗಳ ಮೂಲಕ ಎಲ್ಲರ ಸಂಪರ್ಕವಾಗುತ್ತಿತ್ತು. ಮುಂಚೆಯೇ ಪ್ಲಾನ್ ಮಾಡಿಕೊಳ್ಳುತ್ತಿದ್ದ ಬಂಧಿತರು ಗರ್ಲ್ ಫ್ರೆಂಡ್ ಗಳನ್ನ ಮರಳು ಮಾಡಿ ಪರಸ್ಪರ ಎಕ್ಸ್ ಚೇಂಜ್ ಮಾಡಿಕೊಂಡು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುತ್ತಿದ್ದರು ಎನ್ನಲಾಗಿದೆ.
ಇನ್ನು , ಅನೇಕ ಮಂದಿ ಗರ್ಲ್ ಫ್ರೆಂ ಡ್ ಸ್ವಾಪಿಂಗ್ ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು , ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ