ಬೆಂಗಳೂರು: ಲಂಚದ ಹಣಕ್ಕೆ ಕೈಯೊಡ್ಡಿದಾಗಲೇ ಅಬಕಾರಿ ಡಿಸಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.
ಜಗದೀಶ್ ನಾಯಕ್ ಲೋಕಾಯುಕ್ತ ಬಲೆಗೆ ಬಿದ್ದು ಬಂಧಿತರಾಗಿರುವ ಅಬಕಾರಿ ಡಿಸಿ. 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಅಬಕಾರಿ ಡಿಸಿ ಜಗದೀಶ್ ಅವರನ್ನು ಬಂಧಿಸಿದ್ದಾರೆ.
ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 75 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬರಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇದೇ ವೇಳೆ ಅಬಕಾರಿ ಅಧೀಕ್ಷಕ ತಮ್ಮಣ್ಣ, ಮಧ್ಯವರ್ತಿ ಲಕ್ಕಪ್ಪ ಎಂಬುವವರನ್ನೂ ಬಂಧಿಸಲಾಗಿದೆ.




