ಬೆಂಗಳೂರು : ದಲಿತ ಎಂಬ ಕಾರಣಕ್ಕೆ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರರನ್ನು ಬಿಜೆಪಿ ಟಾರ್ಗೆಟ್ ಮಾಡಿಕೊಂಡಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರು, ದಲಿತ ಸಚಿವನಿಗೆ ತೊಂದರೆ ನೀಡಲು ಈ ರೀತಿ ಮಾಡುತ್ತಿದ್ದಾರೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ವಾಗ್ದಾಳಿ ನಡೆಸಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬಿಜೆಪಿ ಕಾಲದಲ್ಲಿ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿತ್ತು. ಆಗ ಅವರ ಸರ್ಕಾರದಲ್ಲಿ ಯಾರು ರಾಜೀನಾಮೆ ಕೊಟ್ಟಿದ್ದರು? ಬಿಜೆಪಿ ಸರ್ಕಾರದ ಅವಧಿಯಲ್ಲಿ ಏನೆಲ್ಲಾ ಭ್ರಷ್ಟಾಚಾರ ಆಗಿದೆ ಎಂದು ಸಚಿವ ತಿಮ್ಮಾಪುರ ಅವರು ಸದನದಲ್ಲಿ ತಿಳಿಸಿದ್ದಾರೆ. ಬಿಜೆಪಿ ಅವರು ಮಾಡುತ್ತಿರುವ ಆರೋಪಕ್ಕೆ ಸಾಕ್ಷ್ಯಗಳಿಲ್ಲ. ಎಲ್ಲವೂ ಸುಳ್ಳು ಆರೋಪಗಳು’ ಎಂದು ಡಿಕೆಶಿ ಹೇಳಿದರು.
‘ನರೇಗಾ ಯೋಜನೆಯಿಂದ ಆಗಿರುವ ಅನುಕೂಲದ ಬಗ್ಗೆ ನಾವು ಚರ್ಚೆ ಮಾಡುತ್ತೇವೆ ಎಂಬುದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ. ನರೇಗಾ ಕಾಯ್ದೆಯಲ್ಲಿ ಪ್ರತಿ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳುವ ಕೆಲಸ ನಿರ್ಧಾರ ಮಾಡಬಹುದಾಗಿತ್ತು.
ಹೊಸ ಕಾಯ್ದೆಯಲ್ಲಿ ಕೇಂದ್ರ ಸರ್ಕಾರ ನಿರ್ಧರಿಸಲಿದೆ. ಈ ಯೋಜನೆಯಿಂದ ಪ್ರತಿ ಹಳ್ಳಿಯಲ್ಲಿ ಎಷ್ಟು ದನದ ಕೊಟ್ಟಿಗೆ ಕಟ್ಟಿಸಬಹುದು? ಎಷ್ಟು ರೈತರ ಜಮೀನು ಮಟ್ಟ ಮಾಡಿಸಬಹುದು ಎಂದು ಬಿಜೆಪಿ ನಾಯಕರು ಹೇಳಲಿ’ ಎಂದು ಸವಾಲ್ ಹಾಕಿದರು.




