ಆಕ್ಲೆಂಡ್ ( ನ್ಯೂಜಿಲೆಂಡ್): ನ್ಯೂಜಿಲೆಂಡ್ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು ಮೊದಲ ಟ್ವೆಂಟಿ- 20-20 ಪಂದ್ಯದಲ್ಲಿ ಆತಿಥೇಯ ತಂಡವನ್ನು 7 ರನ್ ಗಳಿಂದ ಮಣಿಸಿದೆ.
ಇಲ್ಲಿನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಗೆ 164 ರನ್ ಗಳಿಸಿತು. ನಂತರ ಆಡಿದ ನ್ಯೂಜಿಲೆಂಡ್ 9 ವಿಕೆಟ್ ಗೆ 157 ರನ್ ಗಳಿಸುವಲ್ಲಿ ಮಾತ್ರ ಯಶಸ್ವಿಯಾಯಿತು.




