Ad imageAd image

50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ ಜನಗಣತಿಯಿಂದ ವಿನಾಯಿತಿ

Bharath Vaibhav
50 ವರ್ಷ ದಾಟಿದ ಶಾಲಾ ಶಿಕ್ಷಕಿಯರಿಗೆ ಜನಗಣತಿಯಿಂದ ವಿನಾಯಿತಿ
vidhana soudha
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಮಹತ್ವದ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ.

50 ವರ್ಷ ವಯಸ್ಸು ದಾಟಿದ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಶಿಕ್ಷಕಿಯರನ್ನು ಜನಗಣತಿ ಕಾರ್ಯದಿಂದ ಮುಕ್ತಗೊಳಿಸಲು ಕಂದಾಯ ಇಲಾಖೆ ತೀರ್ಮಾನಿಸಿದೆ.

ವಯೋಸಹಜ ಆರೋಗ್ಯ ಸಮಸ್ಯೆಗಳಿರುವ 50 ವರ್ಷ ಮೇಲ್ಪಟ್ಟ ಶಿಕ್ಷಕಿಯರನ್ನು ಮಾತ್ರ ಈ ವಿನಾಯಿತಿಗೆ ಪರಿಗಣಿಸಲಾಗುತ್ತದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕಂದಾಯ ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಹಿರಿಯ ಬೋಧಕರನ್ನು ಕಷ್ಟಕರವಾದ ಜನಗಣತಿ ಕೆಲಸಗಳಿಂದ ಹೊರಗಿಡಬೇಕು ಎಂದು ಶಾಲಾ ಶಿಕ್ಷಕಿಯರ ಸಂಘವು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರ ಈಗ ಅಧಿಕೃತ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಗಳಿಗೆ ಅಧಿಕಾರ

ಅರ್ಹ ಶಿಕ್ಷಕಿಯರನ್ನು ಜನಗಣತಿ ಕರ್ತವ್ಯದಿಂದ ಬಿಡುಗಡೆ ಮಾಡುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ರಾಜ್ಯಾದ್ಯಂತ ಜನಗಣತಿ ಪೂರ್ವಭಾವಿ ಸಿದ್ಧತೆಗಳು ಆರಂಭವಾಗಿದ್ದು, ಜಿಲ್ಲಾಧಿಕಾರಿಗಳು ಮತ್ತು ಮಹಾನಗರ ಪಾಲಿಕೆ ಆಯುಕ್ತರು ಈ ಪ್ರಕ್ರಿಯೆಯ ಉಸ್ತುವಾರಿ ವಹಿಸಿದ್ದಾರೆ.

ವಿಶೇಷ ಶರತ್ತು:

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಅವರು ಹೊರಡಿಸಿರುವ ಆದೇಶದಂತೆ, ಒಂದು ವೇಳೆ ಜನಗಣತಿ ಕಾರ್ಯಕ್ಕೆ ಇತರ ಇಲಾಖೆಗಳ ಸಿಬ್ಬಂದಿ ಕೊರತೆ ಎದುರಾದಲ್ಲಿ ಮಾತ್ರ ಈ ವಿನಾಯಿತಿ ಅನ್ವಯವಾಗುವುದಿಲ್ಲ ಎಂಬ ಶರತ್ತನ್ನು ವಿಧಿಸಲಾಗಿದೆ. ಈ ನಿರ್ಧಾರವು ರಾಜ್ಯದ ಸಾವಿರಾರು ಹಿರಿಯ ಶಿಕ್ಷಕಿಯರಿಗೆ ನೆಮ್ಮದಿ ತಂದಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!