ಹರಿಹರ: ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಹನಗವಾಡಿ ಬಳಿಯಿರುವ ಪಂಚಮಸಾಲಿ ಗುರುಪೀಠದ ಧರ್ಮದರ್ಶಿಗಳ ಸಭೆಯಲ್ಲಿ ಪೀಠದ ಪೀಠಾಧಿಪತಿಗಳಾದ ವಚನಾನಂದ ಸ್ವಾಮೀಜಿ ಅವರನ್ನು ಉಚ್ಚಾಟನೆ ಮಾಡಲು ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಗುರುಪೀಠದ ಆವರಣದಲ್ಲಿ ನಡೆದ ಈ ಮಹತ್ವದ ಧರ್ಮದರ್ಶಿಗಳ ಸಭೆಯಲ್ಲಿ ಒಟ್ಟು 15 ಮಂದಿ ಸದಸ್ಯರು ಭಾಗವಹಿಸಿದ್ದರು.
ಈ ಪೈಕಿ 12 ಜನ ಧರ್ಮದರ್ಶಿಗಳು ವಚನಾನಂದ ಶ್ರೀಗಳ ಉಚ್ಚಾಟನೆಗೆ ಪರವಾಗಿ ಅಂತಿಮ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.




