ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಪೋಕ್ಸೋ ಕೇಸ್ ದಾಖಲಾಗಿತ್ತು.
ಈ ಕೇಸಲ್ಲಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಇಂದು ಮತ್ತೆ ಮಧ್ಯಂತರ ತಡೆಯಾಜ್ಞೆಯನ್ನು ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್ ನೀಡಲಾಗಿದೆ.
ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣದ ಬಂಧಿಸದಂತೆ ನೀಡಲಾಗಿದ್ದಂತ ತಡೆಯಾಜ್ಞೆಯನ್ನು ರದ್ದುಗೊಳಿಸುವ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು.
ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನು ಒಳಗೊಂಡಂತ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡಿತು. ಇಂತಹ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.30ಕ್ಕೆ ವಿಸ್ತರಿಸಿ, ಮಧ್ಯಂತರ ತಡೆಯಾಜ್ಞೆಯನ್ನು ಬಂಧಿಸದಂತೆ ವಿಸ್ತರಿಸಿ ಆದೇಶಿಸಿದರು.
ಅಂದಹಾಗೇ ಬಿಎಸ್ ವೈ ವಿರುದ್ಧದ ಪೋಕ್ಸೋ ಕೇಸ್ ಸಂಬಂಧ ಸಿಐಡಿ ತನಿಖೆ ನಡೆಸಿ, ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಂಧನದ ಭೀತಿ ಎದುರಾಗಿತ್ತು.
ಈ ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ವಯಸ್ಸಿನಲ್ಲಿ ಅವರನ್ನು ಬಂಧಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿತ್ತು. ಇಂದು ಮತ್ತೆ ಈ ಆದೇಶವನ್ನು ಸೆ.30ರವರೆಗೆ ವಿಸ್ತರಿಸಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ರಿಲೀಫ್ ನ