ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ವಂಚನೆ ಎಸಗಲಾಗಿದ್ದು, ಕೇಂದ್ರ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ನೀಡಿದ ದೂರು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ರಾಜ್ಯಪಾಲರ ಹೆಸರಿನಲ್ಲಿ ಫೇಸ್ ಬುಕ್ ಖಾತೆ ತೆರೆದು ಕಿಡಿಗೇಡಿ ಸಾರ್ವಜನಿಕರಿಗೆ ಸಂದೇಶ ಕಳುಹಿಸುತ್ತಿರುವುದು ಗೊತ್ತಾಗಿದೆ. ಎಫ್ ಐ ಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.




