ಕಲಘಟಗಿ: 2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ ಮಾಡಿದ್ದು ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಬೆಳೆ ಸಮೀಕ್ಷೆ ಆ್ಯಪ್ನಲ್ಲಿ ನೊಂದಾಯಿಸಬೇಕು.
ಫಸಲ ಭೀಮಾ ಯೋಜನೆ, ಬೆಳೆ ಪರಿಹಾರ, ಬೆಂಬಲ ಬೆಲೆ ಯೋಜನೆಗಳಿಗೆ ಬೆಳೆ ಸಮೀಕ್ಷೆ ವಿವರ ಬಳಕೆಯಾಗುತ್ತದೆ. ವಿಮೆ ಮಾಡಿಸಿದ ರೈತರು ಕಡ್ಡಾಯವಾಗಿ ತಾವು ಬೆಳೆದ ಬೆಳೆಯನ್ನು ಬೆಳೆ ಸಮೀಕ್ಷೆಯಡಿ ನೋಂದಾಯಿಸಬೇಕು. ಬೆಳೆ ಸಮೀಕ್ಷೆ ಆ್ಯಪ್ ನ್ನು ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು, ಹಿಂಗಾರು ರೈತರ ಬೆಳೆ ಸಮೀಕ್ಷೆ 2024 ಎಂದು ಟೈಪ್ ಮಾಡಿ ಆ್ಯಪ್ ಡೌಗ್ಲೋಡ್ ಮಾಡುವ ಮೂಲಕ ಪಡೆಯಬಹುದು ಹಾಗೂ ಬೆಂಡಲಗಟ್ಟಿ ಗ್ರಾಮದ ರೈತರಿಂದ ಬೆಳೆ ಸಮೀಕ್ಷೆ ಮಾಡಲಾಯಿತು ಎಂದು ಸಹಾಯಕ ಕೃಷಿ ನಿರ್ದೇಶಕರು ಅಮರ ನಾಯ್ಕರ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.