ಬೆಳಗಾವಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮೂಲದ ಮೂವರು ಮಹಿಳೆಯರು ಇಬ್ಬರು ಪುರುಷರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಅಂಬೇಡ್ಕರ್ ನಗರದ ಜಿತೇಂದ್ರ ಕಾಂಬಳೆ ಹಾಗೂ ದೀಪಕ ಕಾಂಬಳೆ ಅವರ ಮೇಲೆ ಮಹಾರಾಷ್ಟ್ರ ಮೂಲದ ಮಹಿಳೆಯರು ಇಟ್ಟಿಗೆ ಹಾಗೂ ಕಲ್ಲಿನಿಂದ ಹೊಡೆದು ಮರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ನಂತರ ಇಬ್ಬರು ಪುರುಷರು ರಕ್ತದ ಮಡುವಿನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಹಲ್ಲೆಯ ವಿಚಾರವಾಗಿ ಕಾಗವಾಡ ಪೊಲೀಸರು ಕೇಸ್ ದಾಖಲಿಸಿಕೊಳ್ಳುವಲ್ಲಿ ವಿಳಂಬ ತೊರಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. ಇಬ್ಬರು ಸದ್ಯ ಕಾಗವಾಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.