ಬೆಳಗಾವಿ : ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿದ್ದಾರೆ. ಹೌದು, ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ಇಬ್ಬರು ಮಕ್ಕಳ ಜೊತೆಗೆ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಕ್ಕಳಾದ ಸಾತ್ವಿಕ್(5), ಒಂದು ವರ್ಷದ ಮುತ್ತಪ್ಪ, 30 ವರ್ಷದ ಯಲ್ಲವ್ವ ಕರಿಹೊಳ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ಈ ಕುರಿತು ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು(ಭಾನುವಾರ) ಗಂಡನ ಜೊತೆಗೆ ಜಗಳವಾಡಿದ್ದ ಪತ್ನಿ ಯಲ್ಲವ್ವ, ಇದರ ಮನನೊಂದು ಮಧ್ಯಾಹ್ನದ ವೇಳೆಗೆ ಮಕ್ಕಳ ಜೊತೆಗೆ ಬಾವಿಗೆ ಹಾರಿ ಕೊನೆಯುಸಿರೆಳೆದಿದ್ದಾರೆ. ಸಧ್ಯ ಮೂವರ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.