Ad imageAd image

ಪಂಜಾಬ್ ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಾರು ಅಪಘಾತ : ಗಂಭೀರ ಗಾಯ 

Bharath Vaibhav
ಪಂಜಾಬ್ ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಾರು ಅಪಘಾತ : ಗಂಭೀರ ಗಾಯ 
WhatsApp Group Join Now
Telegram Group Join Now

ನವದೆಹಲಿ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಂಜಾಬ್ ನ ಪಟಿಯಾಲ ಬಳಿ ನಡೆದಿದೆ.

ದೆಹಲಿಯ ಕನೋಲಿ ಬಾರ್ಡರ್ ನಲ್ಲಿ ಕಳೆದ ಒಂದು ವರ್ಷದಿಂದ ರೈತ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಮಹತ್ವದ ಸಭೆ ಕರೆಯಲಾಗಿತ್ತು.ಈ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ತೆರಳುತ್ತಿದ್ದರು.

ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಪಂಜಾಬ್ ನ ಪಟಿಯಾಲ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅವರ ಜೊತೆ ಕಾರಿನಲ್ಲಿದ್ದ ತಮಿಳುನಾಡಿನ ರೈತ ಮುಖಂಡ ಪಾಂಡಿಯನ್ ಎಂಬುವವರಿಗೂ ಗಾಯಗಳಾಗಿವೆ. ಸ್ಥಳೀಯರ ಸಾಹಾಯದಿಂದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

WhatsApp Group Join Now
Telegram Group Join Now
Share This Article
error: Content is protected !!