ಚನ್ನಮ್ಮನ ಕಿತ್ತೂರು : ಕಿತ್ತೂರು ಕರ್ನಾಟಕ ಜಾಗೃತಿ ರೈತ ಸಂಘ ಹಾಗೂ ಸ್ವಾಭಿಮಾನ ರೈತ ಸಂಘದ ಸಂಯುಕ್ತ ಆಶ್ರಯದಲ್ಲಿ. ರೈತರ ಹುತಾತ್ಮ ದಿನಾಚರಣೆ ಆಚರಿಸಲಾಯಿತು.

ಕಿತ್ತೂರಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ರಾಣಿ ಚನ್ನಮ್ಮನ ಪ್ರತಿಮೆಗೆ. ಅಮಟ್ಟೂರ ಬಾಳಪ್ಪ. ಸಂಗೋಳ್ಳಿ ರಾಯಣ್ಣ ಪ್ರತಿಮೆಗೆ ರೈತ ಮುಖಂಡರು ಮಾಲಾರ್ಪಣೆ ಮಾಡಿ.ನಂತರ ವೀರಭದ್ರೇಶ್ವರ ದೇವಸ್ಥಾನ ವರೆಗೆ ಮೆರವಣಿಗೆ ನಡಿಸಿದರು. ಈ ಕಾರ್ಯಕ್ರಮದ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಪೂಜ್ಯ ಶ್ರೀ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಮಡಿವಾಳೇಶ್ವರ ಮಠದ ಪೂಜ್ಯ ಶ್ರೀ ಪಂಚಾಕ್ಷರಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಮಾತನಾಡಿದರು.
ಕಿತ್ತೂರು ಕರ್ನಾಟಕ ಜಾಗೃತಿ ರೈತ ಸಂಘದ ರಾಜ್ಯಾಧ್ಯಕ್ಷರಾದ ಎಂ ಫ್ ಜಕಾತಿ ಅವರು ಅವರು ಮಾತನಾಡಿದರು. ಜಿಲ್ಲಾಧ್ಯಕ್ಷರಾದ ಅಪ್ಪೇಶ ದಳವಾಯಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಕಿತ್ತೂರು ತಾಲೂಕಿನ ಅಧ್ಯಕ್ಷರಾದ ಶ್ರಿಕಾಂತ ದಳವಾಯಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ರೈತ ಮುಖಂಡರು. ಮತ್ತು ರೈತರು ಉಪಸ್ಥಿತರಿದ್ದರು.
ವರದಿ: ಜಗದೀಶ ಕಡೋಲಿ




