ಸೇಡಂ: ತಾಲೂಕಿನ ಶಿಲಾರಕೋಟ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಜನವಾಡ ಶಾಲೆಯ ಶೌಚಾಲಯ ವ್ಯವಸ್ಥೆ ತುಂಬ ಹದಗೆಟ್ಟಿದ್ದು. ಅನೇಕ ಬಾರಿ ಮನವಿ ಮಾಡಿದರು ಸಹ ಕ್ರಮ ಕೈಗೊಳ್ಳುತ್ತಿಲ್ಲ ಅದ ಕಾರಣ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಾಲೂಕ ಶಿಕ್ಷಣಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷರಾದ ಅನಿಲ್ ಪೊಟೇಲಿ ಅವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿದರು.
ಮನವಿ ಸ್ವೀಕರಿಸಿದ ತಾಲೂಕ ಶಿಕ್ಷಣಾಧಿಕಾರಿಗಳಾದ ಮಾರುತಿ ಹುಜುರಾತಿ ಅವರು ತಕ್ಷಣ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಿಸಿಯೂಟ ಸಮಸ್ಯೆಯನ್ನು ಒಂದು ವಾರದಲ್ಲಿ ಸರಿಪಡಿಸುವೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕ ಕಾರ್ಯಾಧ್ಯಕ್ಷರಾದ ಸಾಬಪ್ಪ ಅಬ್ಬಗಳ, ತಾಲೂಕ ಉಪಾಧ್ಯಕ್ಷರಾದ ಇಮ್ರಾನ್ ಶೇಖ್, ಕಾಶಪ್ಪ ಮೆದಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




