ಯಮಕನಮರಡಿ: ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ.
ಬೆನಕನಹೊಳಿಯ ಲಕ್ಷ್ಮಣ ರಾಮ ಅಂಬಲಿ(45), ಅವರ ಮಕ್ಕಳಾದ ರಮೇಶ(15), ಯಲ್ಲಪ್ಪ(13) ನೀರುಪಾಲಾದವರು.
ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ ನಿಲ್ಲಿಸಿ, ಮೀನು ಹಿಡಿಯಲು ನದಿ ನೀರಿಗೆ ಇಳಿದಿದ್ದರು.
ಆದರೆ, ಸೋಮವಾರ ಬೆಳಿಗ್ಗೆಯವರೆಗೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈಗ ಎನ್.ಡಿ.ಆರ್.ಎಫ್ ತಂಡದವರು ಹಾಗೂ ಯಮಕನಮರಡಿ ಠಾಣೆ ಪೊಲೀಸರು ನೀರುಪಾಲಾಗಿರುವ ಮೂವರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.