ಬೆಳಗಾವಿ: ರಾಜ್ಯದ ಹಲವಾರು ಭಾಗಗಳಲ್ಲಿ ಮುಂಗಾರು ಮಳೆಯಿಂದ ಆಗಿರುವ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸಿ.ಎಂ
ಸಿದ್ದರಾಮಯ್ಯ ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗಿ.

31-05-2025 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮುಂಗಾರುಪೂರ್ವ ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಮತ್ತು ವಿವಿಧ ಇಲಾಖೆಗಳು ಕೈಗೊಂಡಿರುವ ಯೋಜನೆಗಳು ಹಾಗೂ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದರು.
ವರದಿ: ರಾಜು ಮುಂಡೆ




