ಮಂಡ್ಯ : ಕೆ ಎಸ್ ಆರ್ ಟಿ ಸಿ ಐರಾವತ ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಭೀಕರ ರಸ್ತೆ ಅಪಘಾತ ಮಂಡ್ಯದ ತೂಬಿನಕೆರೆ ಕ್ರಾಸ್ ಬಳಿ ನಡೆದಿದ್ದು ಘಟನೆಯಲ್ಲಿ ಕಾರ್ ಸಂಪೂರ್ಣ ಜಖಂಗೊಂಡಿದೆ
ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಐರಾವತ ಬಸ್, ಮಂಡ್ಯದ ತೂಬಿನಕೆರೆ ಎಕ್ಸಿಟ್‌ನಿಂದ ಮೈಸೂರು ಎಕ್ಸ್ಪ್ರೆಸ್ ವೇಗೆ ನುಗ್ಗಿದ ಕಾರ್ ಗೆ ಡಿಕ್ಕಿ ಹೊಡೆದಿದೆ.
ಇದರ ಪರಿಣಾಮ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಡ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ