Ad imageAd image

700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ

Bharath Vaibhav
700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ
vidhana soudha
WhatsApp Group Join Now
Telegram Group Join Now

ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೌಲಾನಾ ಆಜಾದ್‌ ಮಾದರಿ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ ಹುದ್ದೆಗಳು ಸೇರಿದಂತೆ 700 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

ರಾಜ್ಯದಲ್ಲಿ 2018-19 ನೇ ಸಾಲಿನಲ್ಲಿ ಆರಂಭಿಸಲಾದ 100 ಮೌಲಾನಾ ಆಜಾದ್‌ ಮಾದರಿ ಶಾಲೆಗಳಿಗೆ ಪ್ರತಿ ಶಾಲೆಗೆ 7 ಹುದ್ದೆಗಳಂತೆ ಒಟ್ಟು 700 ಹುದ್ದೆಗಳನ್ನು ಸೃಜಿಸಿ ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

ಹುದ್ದೆಗಳ ವಿವರ

ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದ ಮೌಲಾನಾ ಆಜಾದ್‌ ಮಾದರಿ ಶಾಲೆಗಳಲ್ಲಿ ಮುಖ್ಯೋಪಾಧ್ಯಾಯರ 100 ಹುದ್ದೆಗಳು

ಕನ್ನಡ-100

ಇಂಗ್ಲಿಷ್-‌100

ಉರ್ದು ಭಾಷೆ-100

ಗಣಿತ-100

ವಿಜ್ಞಾನ-100

ಸಮಾಜ ವಿಜ್ಞಾನ -100 ಹುದ್ದೆಗಳು ಸೇರಿದಂತೆ ಒಟ್ಟು 700 ಹುದ್ದೆಗಳಿಗೆ ವೃಂದ ಹಾಗೂ ನೇಮಕಾತಿ ನಿಯಮಗಳ ಅನ್ವಯ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

 

 

WhatsApp Group Join Now
Telegram Group Join Now
Share This Article
error: Content is protected !!