Ad imageAd image

ದ್ವೇಷ ಭಾಷಣ : ಕಲ್ಲಡ್ಕ ಪ್ರಭಾಕರ್ ಸೇರಿ 15 ಜನರ ವಿರುದ್ಧ ಎಫ್‌ಐಆರ್

Bharath Vaibhav
ದ್ವೇಷ ಭಾಷಣ : ಕಲ್ಲಡ್ಕ ಪ್ರಭಾಕರ್ ಸೇರಿ 15 ಜನರ ವಿರುದ್ಧ ಎಫ್‌ಐಆರ್
WhatsApp Group Join Now
Telegram Group Join Now

ಮಂಗಳೂರು : ಆರ್​ಎಸ್​ಎಸ್​​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ದಕ್ಚಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದಲ್ಲಿ ಮೇ.12 ರಂದು ಮಂಗಳೂರಿನಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 353(2) BNSರಡಿ ಪ್ರಕರಣ ದಾಖಲಾಗಿದೆ.

ಕನ್ನದ ಜಿಲ್ಲೆಯಲ್ಲಿ ಸರಣಿ ಕೊಲೆ ಬೆನ್ನಲೇ ರಾತ್ರೋ ರಾತ್ರಿ ನೂತನ ಎಸ್ ಪಿ ಹಿಂದೂ ಸಂಘಟನೆಗಳ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಮಧ್ಯರಾತ್ರಿ ಮನೆಗಳಿಗೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಈ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಪೊಲೀಸ್ ಠಾಣೆ ಮುಂದೆ ಜಮಾವಣೆಗೊಂಡಿದ್ದ ಕಾರ್ಯಕರ್ತರ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ.

ಯಾವುದೇ ಅನುಮತಿ ಪಡೆಯದೇ ಗುಂಪುಕಟ್ಟಿಕೊಂಡು ಬಂದು ಕಡಬ ಠಾಣೆಯ ಮುಂದೆ ಕಾನೂನು ಬಾಹಿರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿ ಎಫ್ ಐ ಆರ್ ದಾಖಲಿಸಲಾಗಿದೆ.

ಪ್ರಮೋದ್ ರೈ ನಂದಗುರಿ, ತಿಲಕ್ ನಂದಗುರಿ, ಮೋಹನ್ ಕೆರೆಕೋಡಿ, ಚಂದ್ರಶೇಖರ್ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನುಂದಗುರಿ, ಶ್ರೇಯತ್, ಉಮೇಶ್ , ರಾಧಾಕೃಷ್ಣ, ಜಯಂತ್ ಸೇರಿದಂತೆ 15 ಜನರ ವಿರುದ್ಧ ಎಫ್ ಐ ಆರ್ ದಾ ಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!