ಬೆಂಗಳೂರು : ಕಾರು ಓವರ್ ಟೇಕ್ ಮಾಡಿದ್ದಕ್ಕೆ ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ ದೂರು ದಾಖಲಾಗಿದೆ.
ನೆಲಮಂಗಲದ ಹಳೇ ನಿಜಗಲ್ ಬಳಿ ಸಂಸದರ ಕಾರನನ್ನು ಓವರ್ ಟೇಕ್ ಮಾಡಿದ್ದಕ್ಕೆ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಸಲ್ಮಾನ್, ಸೈಫ್, ಇಲಿಯಾಜ್, ಗುಲಷಿರ್ ಉನ್ನೀಸಾ ಎಂಬವರು ದೂರು ದಾಖಲಿಸಿದ್ದು, ಈ ಹಿನ್ನಲೆ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಕಾರಿನಲಿದ್ದ ನಾಲ್ವರನ್ನು ನೆಲಮಂಗಲ ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ.
ವಿಚಾರಣೆಯ ವೇಳೆ ಅನಂತ್ ಕುಮಾರ್ ಹೆಗಡೆ ಅವರಿಗೆ ಬೆದರಿಕೆ ಇದ್ದ ಕಾರಣ ಗನ್ ಹೊರತೆಗೆದಿದ್ದೇನೆ ಎಂದು ಅಷ್ಟೇ ಎಂದು ಗನ್ ಮ್ಯಾನ್ ಶ್ರೀಧರ್ ತಿಳಿಸಿದ್ದಾರೆ.
ಸದ್ಯ ಮೂವರನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದು ಎಫ್ ಐ ಆರ್ ದಾಖಲಿಸಿದ್ದು, ಅಗತ್ಯ ಬಿದ್ದರೆ ಮೂವರನ್ನು ಬಂಧಿಸುತ್ತೇವೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ತಿಳಿಸಿದ್ದಾರೆ.